Author: Vidyamaana

ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಟ್ಯಾಂಕರ್‌ ಹಾಗೂ ಬಸ್‌ ಚಾಲಕ ಸಹಿತ ಹಲವರಿಗೆ ಗಾಯ

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಹಾಗೂ ಸುಬ್ರಹ್ಮಣ್ಯದಿಂದ…

ಬಂಟ್ವಾಳ| ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಕೆಎಸ್ಸಾರ್ಟಿಸಿ ಬಸ್‌

ಬಂಟ್ವಾಳ : ಧರ್ಮಸ್ಥಳ‌ – ಮಂಗಳೂರು� ಮಧ್ಯೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸೋಮವಾರ ಸಂಜೆ ನಡೆದಿದೆ.ಘಟನೆಯಲ್ಲಿ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ…

ಪುತ್ತೂರು : ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಮುರ ಸಮೀಪ ಅಪಘಾತ

ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ. ದೋಸ್ತ್ ವಾಹನ ಆಂಬ್ಯುಲೆನ್ಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮಗುವಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.…

ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ.! ಆರಂಭಿಕ ಲಕ್ಷಣವೇನು ಗೊತ್ತಾ?

ಕೇರಳದ ಉತ್ತರ ಮಲಪ್ಪುರ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿ ಪಾಕ್ಸ್‌ ಸೋಂಕು ದೃಢಪಟ್ಟಿತ್ತು. ಆತ ಯುಎಇಯಿಂದ ಕೇರಳಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿತ್ತು. ಈ ಕೇಸ್ ದೃಢವಾಗುತ್ತಿದ್ದಂತೆಯೇ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂದ…

BIG NEWS: ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸನ್ಸ್ ರದ್ದುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು : 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಲಾಯಿತು. ಈ ವೇಳೆ…

ರೇಣುಕಾಸ್ವಾಮಿ ಹತ್ಯೆ ಕೇಸ್‌ : ಎ16 ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಮೊದಲ ಜಾಮೀನು (Bail) ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ (KeshavMurthy) ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು.…

ಫ್ರಿಡ್ಜ್‌ನಲ್ಲಿ ಮಹಿಳೆ ಶವ ಪೀಸ್‌ ಪೀಸ್‌; ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆ:ಬೆಂಗಳೂರು ಸಿಟಿ ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌

ಬೆಂಗಳೂರಿನ ವೈಯಾಲಿಕಾವಲ್‌ನ ಮನೆಯೊಂದರಲ್ಲಿ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಶವವನ್ನು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ಈ ಕೇಸ್‌ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೊಲೆ ಆರೋಪಿ ಯಾರು ಎನ್ನುವ ಸುಳಿವು ಸಿಕ್ಕಿದೆ ಎಂದು ವರದಿಯಾಗಿದೆ.ಇಂದು ಪ್ರೆಸ್‌ಮೀಟ್‌ ನಡೆಸಿದ ಬೆಂಗಳೂರು…

ಬೆಂಗಳೂರು: ಡ್ರಗ್ಸ್ ಕೇಸ್ನಲ್ಲಿ ದಂಪತಿ ಅರೆಸ್ಟ್, 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು, ಸೆಪ್ಟೆಂಬರ್ 23: ಡ್ರಗ್ಸ್ ಪೆಡ್ಲಿಂಗ್ ( Drug Peddling ) ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ( CCB Police ) ಬೆಂಗಳೂರು ( Bengaluru) ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ…

ಕೊಳೆಗೇರಿಯಲ್ಲಿ ಹುಟ್ಟಿ, ದುಬೈ ಐಷಾರಾಮಿ ಜಗತ್ತಿನಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ ರಿಜ್ವಾನ್.!

ಮುಂಬೈ: ಸೆಪ್ಟೆಂಬರ್‌ 23: ಸಾಧನೆ ಅಂದ್ರೆ ಹೀಗಿರಬೇಕು.. ಮುಂಬೈನ ಕೊಳೆಗೇರಿಯಲ್ಲಿ ಜನಿಸಿದ್ರು, ಉದ್ಯಮ ಸಾಮ್ರಾಜ್ಯ ಕಟ್ಟಿ ಬೆಳೆಸಿದ್ದು ದುಬೈನ ಐಷರಾಮಿ ಜಗತ್ತಿನಲ್ಲಿ. ಇವರೇ ಡ್ಯಾನ್ಯೂಬ್ ಗ್ರೂಪ್ಸ್‌ ಸಂಸ್ಥಾಪಕ ರಿಜ್ವಾನ್ ಸಾಜನ್. ಕಲ್ಲು ಮುಳ್ಳುಗಳ ದಾರಿಯಲ್ಲಿ ಸಾಗಿ ಸಾಧನೆಯ ಶಿಖರವೇರಿದ ರಿಜ್ವಾನ್ ಅವರ…

ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ; ಅರವಿಂದ್ ಕೇಜ್ರಿವಾಲ್ ಕುರ್ಚಿ ಖಾಲಿ ಉಳಿಸಿದ ನೂತನ ಸಿಎಂ

ಹೊಸದಿಲ್ಲಿ: ಇಂದು ಆಪ್ ನಾಯಕಿ ಅತಿಶಿ ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ತಮ್ಮ ಪಕ್ಕ ಖಾಲಿ ಕುರ್ಚಿಯನ್ನು ಇಟ್ಟುಕೊಳ್ಳುವ ಮೂಲಕ ಅರವಿಂದ್ ಕೇಜ್ರಿವಾಲ್‌ರೊಂದಿಗಿನ ಭಾವನಾತ್ಮಕ ಸಂಬಂಧವನ್ನು ಮತ್ತೊಮ್ಮೆ ಪ್ರದರ್ಶಿಸಿದರು. ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ…

Join WhatsApp Group
error: Content is protected !!