ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ.
ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ
ಪುತ್ತೂರು: ಶೂರರಾಜ ಪೌತ್ರನಾದ ವಸುದೇವನ ಪುತ್ರ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀನಿವಾಸ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಪದ್ಮಾವತಿಯ ಕಲ್ಯಾಣೋತ್ಸವ ಡಿ.29ರಂದು ಸಂಜೆ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿಂದ ಮತ್ತು ಭಕ್ತಿ ಪ್ರಧಾನವಾಗಿ…
