Author: Vidyamaana

ಬಂಟ್ವಾಳ: ಹುಲಿ ವೇಷ ಹಾಕಿ ಬಂದ ಹಣವನ್ನು ಬಡ ರೋಗಿಗೆ ನೀಡಿದ ಪುಟಾಣಿಗಳು- ಮಕ್ಕಳಿಗೆ 25 ಸಾವಿರ ರೂಪಾಯಿ ನೀಡಿ ಸನ್ಮಾನಿಸಿದ ಮಿಥುನ್ ರೈ..!!

ಪುತ್ತೂರು: ಗೋಣಿ ಚೀಲ ಹಾಗೂ ಡಬ್ಬಿಗಳನ್ನು ಬಳಸಿ ಹುಲಿವೇಷ ತಯಾರಿಸಿಕೊಂಡು, ಎರಡು ದಿನಗಳ ಕಾಲ ಕುಣಿದು ಸಂಗ್ರಹಿಸಿದ ಹಣವನ್ನು ಬಡ ರೋಗಿಯೊಬ್ಬರಿಗೆ ನೀಡುವ ಮೂಲಕ ಬಂಟ್ವಾಳ ತಾಲೂಕಿನ ಸಜಿಪ ಪಡು ಗ್ರಾಮದ ಏಳು ಪುಟಾಣಿ ಮಕ್ಕಳು ಮಾನವೀಯತೆ ಮೆರೆದಿದ್ದಾರೆ.ಸಜಿಪ ಗುತ್ತು ಪಡು…

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಅ.ಕ್ರ. 139/2007ರ ಐಪಿಸಿ ಕಲಂ 366, 368, 420, 120 ಮತ್ತು 149ರ…

ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಕಾರು ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ, ವಿದ್ಯಾರ್ಥಿ ಮೃತ್ಯು..!!

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜಾರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನಾ…

ಪುತ್ತೂರು ದಸರಾ ಕಾರ್ಯಕ್ರಮ: ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ 92ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಸಂಜೆ ನಡೆದ ಶ್ರೀ ಶಾರದಾ ದೇವಿಯ ಶೋಭಾಯಾತ್ರೆಯಲ್ಲಿ ಕೇರಳದ ಸಾಂಪ್ರದಾಯಿಕ ಕಲಾಪ್ರಕಾರಗಳು ಮತ್ತು ಕರ್ನಾಟಕದ ವಾದ್ಯಮೇಳಗಳು ಗಮನ ಸೆಳೆದವು.ಬೊಳುವಾರು ವೃತ್ತದಿಂದ ಆರಂಭವಾದ ಶೋಭಾಯಾತ್ರೆಗೆ ಉದ್ಯಮಿ ಸದಾಶಿವ…

ಶಿವಮೊಗ್ಗ ದಸರಾ ಜಂಬೂಸವಾರಿಯಲ್ಲಿ ಅವಘಡ: ಬೆದರಿ ಓಡಿದ ಆನೆ, ಕೆಳಗೆ ಬಿದ್ದ ಬೆಳ್ಳಿ ಅಂಬಾರಿ..!!

ಶಿವಮೊಗ್ಗ, ಅ.21: ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಅಂಬಾರಿ ಹೊತ್ತಿದ್ದ ಆನೆ ಬೆದರಿ ಓಡಿದ ಪರಿಣಾಮ, ಅದರ ಮೇಲಿದ್ದ ಬೆಳ್ಳಿ ಅಂಬಾರಿ ಕಳಚಿ ಕೆಳಗೆ ಬಿದ್ದ ಆತಂಕಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ವಿಗ್ರಹಕ್ಕೂ ಹಾನಿಯಾಗಿದೆ. ಘಟನೆಯಿಂದಾಗಿ ಸಾರ್ವಜನಿಕರಲ್ಲಿ ಆತಂಕ…

ಕೊಡಗಿನಲ್ಲಿ ಘೋರ ದುರಂತ: ಕೆರೆಗೆ ಕಾರು ಉರುಳಿ ಒಂದೇ ಕುಟುಂಬದ ಮೂವರು ಮೃತ್ಯು..!!

ಮಡಿಕೇರಿ: ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪ ನಡೆದಿದೆ.ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ…

ಅ. 22: ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಘೋಷಿಸಲಾಗಿದ್ದ ದಸರಾ ರಜೆಯನ್ನು ಒಂದು ದಿನ ವಿಸ್ತರಿಸಿ ಅಕ್ಟೋಬರ್ 22ರವರೆಗೆ ಮುಂದುವರಿಸಲಾಗಿದೆ.ಈ ಹಿಂದೆ ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ದಸರಾ ರಜೆ ಘೋಷಿಸಲಾಗಿತ್ತು. ಅಕ್ಟೋಬರ್ 21ರಂದು ದಸರಾ ಹಬ್ಬದ ಪೂಜೆ ಹಾಗೂ ಮೆರವಣಿಗೆಯ ಅಂತಿಮ…

ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಹಾಗೂ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ…

ಅತ್ತೆಯ ಮನೆಗೆ ಕಲ್ಲೆಸೆದು ಹಾನಿ, ಜೀವಬೆದರಿಕೆ ಆರೋಪ: ಸೊಸೆಯ ವಿರುದ್ಧ ಪ್ರಕರಣ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆಗೆ ಜೀವಬೆದರಿಕೆ ಹಾಕಿ, ಮನೆಯ ಕಿಟಕಿಯ ಗಾಜಿಗೆ ಕಲ್ಲೆಸೆದು ಹಾನಿ ಮಾಡಿದ ಆರೋಪದ ಮೇಲೆ ಸೊಸೆಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬದ ಕೊಯಿಲ ನಿವಾಸಿ ನೀಲಮ್ಮ (70) ಅವರು ನೀಡಿದ ದೂರಿನ ಪ್ರಕಾರ,…

ಸವಣೂರು ಕುವತ್ತೋಡಿಯಲ್ಲಿ ಜೂಜಾಟ: ಐವರು ವಶಕ್ಕೆ, ₹18,150 ನಗದು ವಶ..!!

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅ. 20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಾರೆ…

Join WhatsApp Group
error: Content is protected !!