ದರ್ಬೆ ಗಲಾಟೆ: ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡಿರಲಿಲ್ಲ-ಆಲ್ಕೋಮೀಟರ್ ಪರೀಕ್ಷೆಯಲ್ಲಿ ದೃಢ:ದೂರು-ಪ್ರತಿದೂರುಗಳ ತನಿಖೆ ಮುಂದುವರಿಕೆ; ಮಾಹಿತಿ, ದಾಖಲೆಗಳಿದ್ದರೆ ಠಾಣಾಧಿಕಾರಿಗಳನ್ನು ಸಂಪರ್ಕಿಸಲು ಮನವಿ..!!
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್‌ಸ್ಟೆಬಲ್‌ವೊಬ್ಬರು, ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಬಳಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿರುವುದಾಗಿ ಕೆಲವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು,…
