Category: Uncategorized

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ : ಅಂಗಡಿ ಬಂದ್‌ಗೆ ಬಲವಂತ ಮಾಡಿದರೆ ಕ್ರಮ-ಈದ್ ಮಿಲಾದ್ ಹಿನ್ನೆಲೆ ಭದ್ರತೆ;ದರ್ಬೆ ಗಲಾಟೆ ಪ್ರಕರಣ ಲಘುವಾಗಿ ಪರಿಗಣಿಸಿಲ್ಲ ಪೊಲೀಸರು ಸ್ಪಷ್ಟನೆ..!!

ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ (ಆ.24) ಪೊಲೀಸ್ ಪಥಸಂಚಲನ ನಡೆಸಲಾಯಿತು.ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿಗಳು ಮುಚ್ಚಿರುತ್ತವೆ. ಆದರೆ, ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ…

ಸರಿಗಮಪ ಲಿಟಲ್ ಚಾಂಪ್ಸ್‌-2026ರ ವಿನ್ನರ್ ಅಶ್ಮಿತ್ ಎ.ಜೆ.ಮಂಗಳೂರು: ಝೀ ಕನ್ನಡ ವಾಹಿನಿಯ ‘ಸರಿಗಮಪ ಲಿಟಲ್ ಚಾಂಪ್ಸ್‌-2026’ ಸಂಗೀತ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಬಾಲ ಪ್ರತಿಭೆ ಅಶ್ಮಿತ್ ಎ.ಜೆ. ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…

ಬೆಳ್ತಂಗಡಿ:ಕೊಲ್ಲುವ ಉದ್ದೇಶದಿಂದ ವಾಹನ ಡಿಕ್ಕಿ: ಆರೋಪಿ ಶರತ್ ಬಂಧನ..!!

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಟಾಟಾ ಸುಮೊ ವಾಹನದಿಂದ ಡಿಕ್ಕಿ ಹೊಡೆದು ಕೊಲ್ಲಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಕೆಲವು ತಿಂಗಳುಗಳ…

ಬಂದ್‌ಗೆ ಕರೆ: ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಪ್ರಸಾರ; FIR

ಪುತ್ತೂರು: ದರ್ಭೆಯಲ್ಲಿ ಆ.21ರಂದು ನಡೆದ ಗಲಾಟೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವಂತಹ ಸಂದೇಶಗಳನ್ನು ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ…

ಪುತ್ತೂರು:ಜಾನುವಾರು ಖರೀದಿಸಿ ಅಕ್ರಮ ಸಾಗಾಟ: ಮಹಮ್ಮದ್ ಜಬ್ಬಾರ್ ಬಂಧನ; ಅಶೋಕ್ ಹೆಸರು ಉಲ್ಲೇಖ..!!

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿ, ಮೂರು ಜಾನುವಾರುಗಳನ್ನು ಹಾಗೂ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ಆ.23ರಂದು ಬೆಳಿಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ…

ದರ್ಬೆ ಗಲಾಟೆ ಪ್ರಕರಣ: ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರ ಮನವಿ; ಇಂದು ಶಾಂತಿ ಸಭೆ..!!

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಾಕ್ಷ್ಯಾಧಾರಗಳು ಹಾಗೂ ಕಾನೂನು ಪ್ರಕಾರ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.ಲ್ಯಾಮಿನೇಶನ್ ಯಂತ್ರದಲ್ಲಾದ ತಾಂತ್ರಿಕ ದೋಷದಿಂದ ದಾಖಲೆಯೊಂದು ಹಾನಿಗೊಳಗಾದ ಘಟನೆ ಬಳಿಕ ಗಲಾಟೆ…

ಗುರುಪ್ರಸಾದ್‌ರ ಅಕಾಲಿಕ ನಿಧನ: ಮಿಲಾದ್‌ ಕಾರ್ಯಕ್ರಮ ಮುಂದೂಡಿ ಸೌಹಾರ್ದತೆ ಮೆರೆದ ಮಸೀದಿ ಆಡಳಿತ..!!

ರಾಮಕುಂಜ: ಕೊಯಿಲ ಗ್ರಾಮದ ಕುದುಲೂರು ನಿವಾಸಿ, ರಿಕ್ಷಾ ಚಾಲಕ ಗುರುಪ್ರಸಾದ್‌ (35) ಅವರು ಆ.22ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.ಗೋಳಿತ್ತಡಿ ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಗುರುಪ್ರಸಾದ್‌, ಸಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಪ್ರತಿದಿನ ರಿಕ್ಷಾದಲ್ಲಿ ಮನೆಗೆ ಕರೆದೊಯ್ಯುತ್ತಿದ್ದರು. ಆ.22ರಂದು ಶಾಲೆಗೆ…

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 379 ಹಾಗೂ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್‌ಗೆ ಹೈಕೋರ್ಟ್ ಜಾಮೀನು..!!

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನ.6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು…

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿ ಅರೆಸ್ಟ್

ಮಂಗಳೂರು: ಸುಮಾರು 10 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಪ್ರಕರಣದ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ಕುದ್ರೋಳಿ ಕರ್ಬಲ ರಸ್ತೆಯ ಇಂಪೀರಿಯಲ್ ಹೋಟೆಲ್ ನಿವಾಸಿ ಹೈದರ್ ಅವರ ಪುತ್ರ ನೌಫಾಲ್ (34) ಬಂಧಿತ ಆರೋಪಿಯಾಗಿದ್ದಾನೆ.ಮಂಗಳೂರು ದಕ್ಷಿಣ…

Join WhatsApp Group
error: Content is protected !!