Category: ಕರಾವಳಿ

ಪುತ್ತೂರು: ಫೆ.15-ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ

ಪುತ್ತೂರು: ಪಾರಾದೀಪ್ ಪಾಸ್ಟೇಟ್ಸ್ ಲಿಮಿಟೆಡ್, ಪಣಂಬೂರು–ಮಂಗಳೂರು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ–ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಶಿಬಿರವು ಫೆಬ್ರವರಿ 15, ಭಾನುವಾರ ಬೆಳಿಗ್ಗೆ…

ಮಂಗಳೂರು:ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಕಡೆಗಣಿಸಿದ ಆರೋಪಕ್ಕೆ ಡಿಕೆ ಶಿವಕುಮಾರ್ ಸ್ಪಷ್ಟನೆ: ಕಾಂಗ್ರೆಸ್ ನೀತಿ ಆಧಾರಿತ ರಾಜಕಾರಣ

ಮಂಗಳೂರು: “ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ; ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಮರನ್ನು ಕರೆದಿಲ್ಲ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆಶಿವಕುಮರ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.…

ಕನ್ನಡ ಶಾಲೆ ಉಳಿಸಿ–ಬೆಳೆಸಿ ಅಭಿಯಾನಕ್ಕೆ ರಾಜ್ಯ ಮಾಧ್ಯಮ ವಕ್ತಾರರಾಗಿ ಯೂಸುಫ್ ರೆಂಜಲಾಡಿ ನೇಮಕ

ಪುತ್ತೂರು: ನಾಡು-ನುಡಿ ಮತ್ತು ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಶಾಲೆ ಉಳಿಸಿ–ಬೆಳೆಸಿ’ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕ ಮಾಡಲಾಗಿದೆ.ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಯೂಸುಫ್ ರೆಂಜಲಾಡಿ…

ಸಂತ ಫಿಲೊಮಿನಾ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಚ್ಛತಾ ಅಭಿಯಾನ

ಪುತ್ತೂರು: ಸಂತ ಫಿಲೊಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಆವರಣದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿದ ಸ್ವಯಂಸೇವಕರು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಶ್ರೀಮತಿ ಪುಷ್ಪಾ ಅವರು ಸ್ವಯಂಸೇವಕರಿಗೆ…

ಮಂಗಳೂರು :ಮರಣದ ಅಂಚಿನಿಂದ ಮರಳಿದ ಬಾಲಕಿ: ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ..!!

ಮಂಗಳೂರು: ಕಬ್ಬಿಣದ ರಾಡ್‌ ಎದೆಯೊಳಗೆ ತೂರಿ ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿ ರಕ್ಷಿಸಿದೆ.ಜನವರಿ 18ರಂದು ಬಾಲಕಿ (ಹೆಸರು ಬದಲಾಯಿಸಲಾಗಿದೆ) ಆಟವಾಡುವ ವೇಳೆ ಆಕಸ್ಮಿಕವಾಗಿ ಕಬ್ಬಿಣದ ರಾಡ್‌ ಮೇಲೆ ಬಿದ್ದು…

ಇಂದು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಪುತ್ತೂರು ರೋಟರಿ ಮ್ಯಾಮೋಗ್ರಫಿ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಜ್ಞಾನ ವಿಕಾಸ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.1ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 2…

ಪುತ್ತೂರು :ಫೆ.01-ಸಮಾಜಮುಖಿ ಸೇವೆಯ 50 ವರ್ಷ: ನೆಲ್ಲಿಕಟ್ಟೆ ಮಿತ್ರಮಂಡಲಕ್ಕೆ ಸುವರ್ಣ ಸಂಭ್ರಮ..!!

ಪುತ್ತೂರು: ಕಳೆದ 50 ವರ್ಷಗಳಿಂದ ಪುತ್ತೂರಿನಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ನೆಲ್ಲಿಕಟ್ಟೆ ಮಿತ್ರಮಂಡಳಿಯ ಸುವರ್ಣ ಸಂಭ್ರಮ ಕಾರ್ಯಕ್ರಮ ಫೆಬ್ರವರಿ 1ರಂದು ನಡೆಯಲಿದೆ ಎಂದು ಮಿತ್ರಮಂಡಳಿಯ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ…

ಇಂದು ಆನೆಮಜಲಿನಲ್ಲಿ ₹51.90 ಕೋಟಿ ವೆಚ್ಚದ ನೂತನ ಪುತ್ತೂರು ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಪುತ್ತೂರು: ಆನೆಮಜಲು ಪ್ರದೇಶದ 4.84 ಎಕರೆ ಜಾಗದಲ್ಲಿ ₹51.90 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 12 ಹವಾನಿಯಂತ್ರಿತ ಕೋರ್ಟ್ ಹಾಲ್‌ಗಳನ್ನು ಒಳಗೊಂಡ ನೂತನ ಪುತ್ತೂರು ನ್ಯಾಯಾಲಯ ಸಂಕೀರ್ಣವು ಜ.31ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ. ಮಧ್ಯಾಹ್ನ 2.45ರಿಂದ ನ್ಯಾಯಾಲಯದ ಕಲಾಪಗಳು ಹೊಸ ಸಂಕೀರ್ಣದಲ್ಲಿ…

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಆದಾಗ್ಯೂ, ಸರ್ಕಾರಿ ವೈದ್ಯರು ತಮ್ಮ ನಿಯಮಿತ ಸರ್ಕಾರಿ ಕರ್ತವ್ಯಗಳನ್ನು ಪೂರ್ಣಗೊಳಿಸಿದ ನಂತರ ಖಾಸಗಿ ಚಿಕಿತ್ಸಾಲಯ ಅಥವಾ ಆಸ್ಪತ್ರೆಗಳಲ್ಲಿ ಹೊರರೋಗಿ…

ಉದ್ಯಮಿ ದಿವಾಕರ ದಾಸ್ ನೇರ್ಲಾಜೆಯವರಿಂದ ಡಾ. ಸುರೇಶ್ ಪುತ್ತೂರಾಯ ದಂಪತಿಗೆ ಸನ್ಮಾನ

ಪುತ್ತೂರು: ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ ಆಗಿರುವ ಜನಪ್ರಿಯ ವೈದ್ಯ ಡಾ. ಸುರೇಶ್ ಪುತ್ತೂರಾಯ ಹಾಗೂ ಅವರ ಪತ್ನಿ ಡಾ. ಆಶಾ ಪುತ್ತೂರಾಯ ಅವರನ್ನು ಮೈಸೂರಿನ ಎಸ್‌.ಎಲ್‌.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ದಿವಾಕರ…

Join WhatsApp Group
error: Content is protected !!