Category: ಕ್ರೈಂ

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ

ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಮಧ್ಯಾಹ್ನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ…

ಕೆ.ಜಿ.ಹಳ್ಳಿ ಠಾಣೆ ಸಬ್ ಇನ್ಸ್‌ಪೆಕ್ಟರ್ ಹೆಂಡತಿ ಶಾಲಿನಿ ಆತ್ಮಹತ್ಯೆ

ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಶಾಲಿನಿ ಹಾಗೂ ಪಿಎಸ್‌ಐ ನಾಗರಾಜ್ ಅವರು ಚಿಕ್ಕಂದಿನಲ್ಲಿ ಟ್ಯೂಷನ್‌ ಮೇಟ್ಸ್ ಆಗಿದ್ದರು. ನಂತರ ಶಾಲಿನಿಯವರು ಎಂ.ಎಸ್.ಸಿ…

ರೈಲಿನಲ್ಲಿ ಬಹಿರಂಗವಾಗಿಯೇ ರಾಸಲೀಲೆ ; ಮಿತಿ ಮೀರಿದ ಜೋಡಿಗೆ ಪ್ರಯಾಣಿಕರಿಂದ ಗೂಸಾ | Viral Video

ಊರಿನಿಂದ ಮತ್ತೊಂದು ಊರಿಗೆ ಪ್ರಯಾಣಿಸಲು ರೈಲು ಸುಲಭವಾದ ಸಾರಿಗೆ ವ್ಯವಸ್ಥೆಯಾಗಿದೆ. ಪ್ರಯಾಣಿಕರು ಆಗಾಗ್ಗೆ ಅನುಚಿತ ವರ್ತನೆ ಮತ್ತು ವಿಚಿತ್ರ ಘಟನೆಗಳ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಒಂದು ರೈಲು ಪ್ರಯಾಣ ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕರ ಆಕ್ರೋಶವನ್ನು ಕೆರಳಿಸುತ್ತಿರುವ ವೈರಲ್…

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ; ಮಣಿಪಾಲದ ರಸ್ತೆ ಮಧ್ಯೆ ಕಲ್ಲುಗಳ ರಾಶಿ!!

ಜಿಲ್ಲೆಯಾದ್ಯಂತ ಮಂಗಳವಾರ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್ ಮೊದಲಾದೆಡೆ ರಸ್ತೆಗಳಲ್ಲಿ ಮಳೆನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು. ಅಂಬಲಪಾಡಿಯಲ್ಲಿ ಮೇಲ್ಲೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನಗಳ…

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ: ಆರೋಪಿ ಅತೀವುಲ್ಲಾ ಖಾನ್ ವಶಕ್ಕೆ

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ಮುಂಬೈನ ಮಸೀವುಲ್ಲಾ ಅತೀವುಲ್ಲಾ ಖಾನ್ (36) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಆರೋಪಿಯು ದೂರುದಾರರಿಗೆ…

ಬಂಟ್ವಾಳದ ಪಲ್ಲಿಕಂಡದಲ್ಲಿ ಕುಸಿದು ಬಿದ್ದ ಮನೆ

ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸೋಮವಾರ (ಮೇ.19) ತಡರಾತ್ರಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಪಲ್ಲಿಕಂಡ ನಿವಾಸಿ ಸಿಸಿಲಿಯಾ ಪಿಂಟೊ ಅವರ ಮನೆ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಉಂಟಾಗಿಲ್ಲ.

ಶಾಲೆಯ ಆವರಣದಲ್ಲಿ ಯುವಕ ಆತ್ಮಹತ್ಯೆ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ’ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ…

ಸುಹಾಸ್ ಶೆಟ್ಟಿ ಕೊಲೆ ಆರೋಪಿ ನೌಷಾದ್  ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌

ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ…

ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕದಿಯುತ್ತಿದ್ದವ ಅರೆಸ್ಟ್

ಖರೀದಿ ನೆಪದಲ್ಲಿ ಆನ್ಲೈನ್ನಲ್ಲಿ ಬೈಕ್ ಬುಕ್ (Bike) ಮಾಡಿ ನಂತರ ಟೆಸ್ಟ್ ಡ್ರೈವ್ ಹೆಸರಲ್ಲಿ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಡೆಪಾಳ್ಯ ಪೊಲೀಸರು (Police) ಬಂಧಿಸಿದ್ದಾರೆ. ಪ್ರದೀಪ್ ಅಲಿಯಾಸ್ ಓಎಲ್‌ಎಕ್ಸ್ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ನನ್ನು ಬಂಧಿಸಿ ವಿಚಾರಣಗೆ ಒಳಪಡಿಸಿದಾಗಿ ಹಲವು ಸಂಗತಿ…

ಮೇ 20 ರಿಂದ 23ರವರೆಗೆ ದ.ಕ.ಜಿಲ್ಲೆಯಲ್ಲಿ ಆರೆಂಜ್ – ರೆಡ್ ಅಲರ್ಟ್: ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು…

Join WhatsApp Group
error: Content is protected !!