Category: ಕ್ರೈಂ

ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್‌ನ ಅಸ್ಥಿಪಂಜರ ಪತ್ತೆ! ಹೆಂಡತಿ ಹೆರಿಗೆಗೆ ಹೋಗಿದ್ದಾಗಲೇ ಸಾವಿನ ಮನೆ ಸೇರಿದ ಪಿಸಿ!

ಬೆಂಗಳೂರಿನಲ್ಲಿ (Bengaluru) ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ (Head Constable Suicide) ಮಾಡಿಕೊಂಡು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆಯನ್ನು ಮುಬಾರಕ್ ಸಿಕಿಂದರ್ ಮುಜಾವರ್ ಎಂದು ಗುರುತಿಸಲಾಗಿದೆ ವರದಿ ಪ್ರಕಾರ ಕಳೆದ ಒಂದೂವರೆ ತಿಂಗಳ ಹಿಂದೆ…

ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್‌ಐಆರ್

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು ವಿ.ಎಚ್.ಪಿ ಹಮ್ಮಿಕೊಂಡಿದ್ದ ಕೊರಗಜ್ಜನ‌…

ವಿರಾಜಪೇಟೆ | ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ಮೃತ್ಯು

ತೋಟದ ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದ ಅತ್ತೂರು ಗ್ರಾ.ಪಂ ವ್ಯಾಪ್ತಿಯ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ತೋಟದ ಕಾರ್ಮಿಕ ಮಹಿಳೆ ಭವಾನಿ ಎಂಬುವವರ ಪುತ್ರಿ ಲಾವಣ್ಯ (10) ಮೃತ ಬಾಲಕಿ.ಲಾವಣ್ಯ ಚನ್ನಂಗೊಲ್ಲಿಯ ಸರಕಾರಿ ಶಾಲೆಯಲ್ಲಿ 4ನೇ…

BREAKING: ಹಿರಿಯ ವಿದ್ಯಾರ್ಥಿಗಳ ಬದಲಾಗಿ ಕಿರಿಯ ವಿದ್ಯಾರ್ಥಿಗಳು ಕ್ಲಾಸ್ ಗೆ ಹಾಜರ್: ಐವರು MBBS ವಿದ್ಯಾರ್ಥಿಗಳು ಸಸ್ಪೆಂಡ್

ಹಿರಿಯ ವಿದ್ಯಾರ್ಥಿಗಳ ಪರವಾಗಿ ಕಿರಿಯ ವಿದ್ಯಾರ್ಥಿಗಳು ಕ್ಲಾಸಿಗೆ ಹಾಜರಾಗಿದ್ದು, ತರಗತಿಗೆ ಹಾಜರಾಗಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಕಾಲೇಜು ಮಹಾವಿದ್ಯಾಲಯದಲ್ಲಿ ನಡೆದಿದೆ. ಹುಬ್ಬಳ್ಳಿಯ ಕಿಮ್ಸ್ ಆಡಳಿತ ಮಂಡಳಿ ಐವರು ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ…

BREAKING: ಅಮೃತಸರದ ಮೇಲೆ ಗ್ರೆನೇಡ್‌ ದಾಳಿ – ಆರೋಪಿಯನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು!

ಪಂಜಾಬ್‌ನ ಅಮೃತಸರದ ಠಾಕೂರ್ದ್ವಾರ ದೇವಸ್ಥಾನದಲ್ಲಿ ನಡೆದ ಗ್ರೆನೇಡ್ ದಾಳಿಯ ಆರೋಪಿಯೊಬ್ಬ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗಜಿತ್ ಸಿಂಗ್ ಅವರ ಪುತ್ರ ಗುರ್ಸಿದಕ್ ಎಂದು ಗುರುತಿಸಲಾಗಿದೆ. ಎರಡನೇ ಆರೋಪಿ ರಾಜು…

ಇನ್ನೋವಾದಲ್ಲಿ ಬಂದು ಕಳ್ಳತನ; ಕಾರಿನ ನಾಲ್ಕೂ ಚಕ್ರ ಕದ್ದು ಖದೀಮರು ಎಸ್ಕೇಪ್!

ಸಿಲಿಕಾನ್ ಸಿಟಿಯಲ್ಲಿ (Bangalore) ಕಳ್ಳರ (Thieves) ಹಾವಳಿ ಹೆಚ್ಚಾಗುತ್ತಲೇ ಇದೆ. ಮನೆಗೆ ನುಗ್ಗಿ ಕಳ್ಳತನ (Home Theft) ಮಾಡುವುದು. ಅಂಗಡಿಗೆ ನುಗ್ಗಿ ಕನ್ನ (Shop Theft) ಹಾಕುವುದು ಎಲ್ಲಾ ಮಾಡ್ತಿದ್ದಾರೆ. ಆದರೆ ಈಗ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರ (Car…

ಪುತ್ತೂರು:ಗುಡ್ಡಕ್ಕೆ ಆಕಸ್ಮಿಕ ಬೆಂಕಿ-ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆ ತಪ್ಪಿದ ಅನಾಹುತ

ಪುತ್ತೂರು :ನಗರದ ಹೊರವಲಯದ ಹೆಬ್ಬಾರಬೈಲು ಪ್ರದೇಶದಲ್ಲಿ ಭಾನುವಾರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಒಣಗಿದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧ ಎಕರೆ ಪ್ರದೇಶವನ್ನು ವ್ಯಾಪಿಸಿತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ…

75 ಕೋಟಿ ಮೌಲ್ಯದ 37 ಕೆ.ಜಿ ಡ್ರಗ್ಸ್ ಜಪ್ತಿ: ಯುವ ಜನರ ಬದುಕಿಗೆ ಎದುರಾಗಲಿದ್ದ ದೊಡ್ಡ ಅಪಾಯ ನಿವಾರಣೆ: ಮಂಗಳೂರು ಪೊಲೀಸರ ಕಾರ್ಯಕ್ಕೆ ಸಿಎಂ ಶ್ಲಾಘನೆ

ಬರೋಬ್ಬರಿ 75 ಕೋಟಿಗೂ ಅಧಿಕ ಮೌಲ್ಯದ ಎಂಡಿಎಂ ಡ್ರಗ್ಸ್ ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ದ ಪ್ರಮಾಣದ ಮಾದಕವಸ್ತು ಪತ್ತೆ ಕಾರ್ಯಾಚಾರಣೆ ಇದಾಗಿದೆ. ಮಂಗಳೂರು ಪೊಲೀಸರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ…

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ.ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ…

ಮಂಗಳೂರು | ಫೋಕ್ಸೋ ಪ್ರಕರಣದ ಆರೋಪಿ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ

ಕಳೆದ ವಾರವಷ್ಟೇ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ, ಮೂಡುಬಿದಿರೆ ಲಾಡಿಯ ಪ್ರಕಾಶ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಪಕ್ಕದ ಮನೆಯ ಹದಿಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಲಾಡಿ ಅಜಂಕಲ್ಲು ನಿವಾಸಿ ಪ್ರಕಾಶ್…

Join WhatsApp Group
error: Content is protected !!