ಉದ್ಯೋಗ ಖಾತರಿ ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ-ಅ.30ರೊಳಗೆ ಪೂರ್ಣಗೊಳಿಸಲು ಸೂಚನೆ
ಪುತ್ತೂರು:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಆಧಾರ್ ಇ-ಕೆವೈಸಿ ಪ್ರಕ್ರಿಯೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 30ರೊಳಗೆ ಎಲ್ಲಾ ಸಕ್ರಿಯ ಉದ್ಯೋಗ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.…
