
ಪೊನ್ನಂಪೇಟೆಯ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಗಿರೀಶ ಎಂದು ಗುರುತಿಸಲಾಗಿದೆ.
ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪ್ರಕರಣ ದಾಖಲಾದ 6 ಗಂಟೆಯಲ್ಲಿ ಕೇರಳ ರಾಜ್ಯದ ತಲಪುಳ ಎಂಬ ಸ್ಥಳದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ಏನಿದು ಘಟನೆ: ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಇಂದು(ಶುಕ್ರವಾರ) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿತ್ತು. ಈತನ ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದನು ಅಲ್ಲದೆ, ಹತ್ಯೆ ಮಾಡಿದ ಬಳಿಕ ಆರೋಪಿ ಗಿರೀಶ ಪರಾರಿಯಾಗಿದ್ದನು





