ಬೆಂಗಳೂರಿನಿಂದ ಗುವಾಹಾಟಿಗೆ ತೆರಳುತ್ತಿದ್ದ ಕಾಮಾಕ್ಯ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಒಡಿಶಾದ ಮಂಗೂಲಿ ನಿಲ್ದಾಣದ ಸಮೀಪದ ಚೌದ್ವಾರ್ ಬಳಿ ನಡೆದಿದೆ.

ಯುಗಾದಿ ಹಬ್ಬದ ದಿನದಂದೇ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 11 ಭೋಗಿಗಳು ಹಳಿ ತಪ್ಪಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ 50ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಟ್ರೈನ್ ನಂ.12551 ಕಾಮಾಕ್ಯ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!