
ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ತಗ್ಗಲೂರು ಗೇಟ್ ಬಳಿ ಬುಧವಾರ ಬೆಳಿಗ್ಗೆ ಬೈಕ್‌ಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ.
ಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಕಾರು ಸೇತುವೆ ಹೊಂದಿಕೊಂಡಿರುವ ಹಳ್ಳಕ್ಕೆ ಉರುಳಿದ್ದರಿಂದ ಕಾರಿನಲ್ಲಿದ್ದ ರಿಯಾಜ್, ಸುಲ್ತಾನ್, ಕೌಶಿಕ್, ಮಹಮ್ಮದ್ ರಿಯಾಜ್, ಹನೀಫ್, ಫಾತಿಯಾ ಸೇರಿದಂತೆ ಬೈಕ್ ಸವಾರ ಸುರೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಬೇಗೂರು ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹಳ್ಳಕ್ಕೆ ಉರುಳಿದ ಕಾರನ್ನು ಮೇಲಕ್ಕೆತ್ತಲಾಯಿತು.
ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ






