

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಹೆಚ್ಚಿರಲಿದೆ.
ಇಂದಿನಿಂದ ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕೆಲವೆಡೆ ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ತಿಳಿಸಲಾಗಿದೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಎರಡ್ಮೂರು ದಿನಗಳಿಂದ ಈ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
