ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಯುವತಿ ತಂದೆ ಆರೋಪಿಸಿದ್ದ ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೋರ್ಟ್‌ಗೆ ಹಾಜರಾದ ಯುವತಿ ಜೀನಾ ಮೆರಿಲ್ ಸ್ವ ಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ.

ತಮ್ಮ ಮಗಳನ್ನ ಅಕ್ರಮ್ ಎಂಬಾತ ಅಪಹರಿಸಿದ್ದಾನೆ ಎಂದು ಪೋಷಕರು ದೂರು ನೀಡಿ, ಯುವತಿಯನ್ನ ಶೀಘ್ರ ಪತ್ತೆ ಹಚ್ಚುವಂತೆ ಆಗ್ರಹಿಸಿ ಹೈ ಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನೂ ಸಲ್ಲಿಸಿದ್ದರು.

ಯುವತಿ ಜೀನಾ ಮೆರಿಲ್ ಮತ್ತು ಅಕ್ರಮ್ ತಮ್ಮ ಲಾಯರ್ ಜೊತೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಯುವತಿ ಜೊತೆ ಮಾತನಾಡಲು ತಾಯಿ ಅನುಮತಿ ಕೇಳಿದಾಗ ನ್ಯಾಯಾಧೀಶರು ಕೊಠಡಿಯಲ್ಲೇ ಅವಕಾಶ ನೀಡಿದ್ದಾರೆ. ಮಗಳನ್ನು ತನ್ನ ಜೊತೆ ಕಳಿಸುವಂತೆ ನ್ಯಾಯಾಧೀಶರಲ್ಲಿ ತಾಯಿ ಮನವಿ ಮಾಡಿದರು. ಆದರೆ ಇದಕ್ಕೆ ಯುವತಿ ಒಪ್ಪಿಲ್ಲ.

ಏಪ್ರಿಲ್ 19 ರಂದು ಅಕ್ರಮ್ ಜೊತೆ ರಿಜಿಸ್ಟರ್ ಮದುವೆ ಮಾಡಿಕೊಳ್ಳುತ್ತೇನೆ. ಮದುವೆ ನಂತರ ತಾಯಿಯನ್ನು ಭೇಟಿಯಾಗುವುದಾಗಿ ಯುವತಿ ಭರವಸೆ ನೀಡಿದ್ದಾಳೆ.

Leave a Reply

Your email address will not be published. Required fields are marked *

Join WhatsApp Group
error: Content is protected !!