

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ಮಾ.21ರಿಂದ ಆರಂಭಿಸಿದ್ದ SSLC ಪರೀಕ್ಷೆ ನಿನ್ನೆ (ಏ.4) ಮುಕ್ತಾಯಗೊಂಡಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಏ.11ರಿಂದ ಕೋಡಿಂಗ್-ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.
ಇದಕ್ಕಾಗಿ 75 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಅಂದ್ಹಾಗೆ ಇ ಬಾರಿ ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಸಾಮಾನ್ಯವಾಗಿ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡ ನಂತರದಲ್ಲಿ 2 ವಾರದೊಳಗಾಗಿ ಫಲಿತಾಂಶ ಪ್ರಕಟಣೆಯಾಗುವ ಸಾಧ್ಯತೆ ಇರುತ್ತದೆ. ಕಳೆದ ಬಾರಿ 10ನೇ ತರಗತಿ ಪರೀಕ್ಷಾ ಫಲಿತಾಂಶ ಮೇ ತಿಂಗಳಿನಲ್ಲಿ ಪ್ರಕಟಣೆಯಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮೊದಲ ವಾರದಲ್ಲಿ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಫಲಿತಾಂಶ ಹೊರಬಿದ್ದ ಕೂಡಲೇ ವಿದ್ಯಾರ್ಥಿಗಳು ಅಧಿಕೃತ ಜಾಲತಾಣ karresults.nic.in ಮತ್ತು kseab.karnataka.gov.in ಕ್ಕೆ ಭೇಟಿ ನೀಡಿ ಪರೀಕ್ಷಿಸಬಹುದು.
