

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿವೆ. ಘೋರಿ ಮೊಹ್ಮದ್, ಘಜನಿ ಮೊಹ್ಮದ್ ಹಾಗೂ ಮಲ್ಲಿಕ್ ಖಫೂರ್ ಇಂತಹವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ಎಚ್‍ಡಿ ಕುಮಾರಸ್ವಾಮಿಗೆಲ್ಲ ಹೆದರುವ ಮಗನೇ ಅಲ್ಲ ಎಂದು ಗುಡುಗಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೆಚ್ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ. ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ ಗೊತ್ತಿದೆ. ನಾನು ಏನಾದ್ರೂ ತಪ್ಪು ಮಾಡಿದ್ರೆ ಯಾವ ಶಿಕ್ಷೆ ಬೇಕಾದ್ರೂ ಕೊಡಲಿ. ನನ್ನ ಆಸ್ತಿ, ಮಕ್ಕಳ ಮತ್ತು ಕುಟುಂಬದ ಆಸ್ತಿ ಎಷ್ಟಿದೆ?, ಅದನ್ನೆಲ್ಲಾ ತೆಗೆಸಿದ್ದಾರೆ. ಕುಮಾರಸ್ವಾಮಿಗೆಲ್ಲಾ ಹೆದರುವಂತಹ ಮಗ ಅಲ್ಲ ಎಂದಿದ್ದಾರೆ.
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ. ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
