ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗದ ಬಾಗಿಲು ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ನಿಂತುಕೊಂಡಿದ್ದರು. ಇಬ್ಬರು ಹಿಂಬದಿ ಸೀಟಿನ ಎಡ ಹಾಗೂ ಬಲ ಬದಿಯ ಬಾಗಿಲಿನ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎರಡೂ ಬಾಗಿಲಿನ ಚಾಲಕನ ಬದಿಯಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಣ ಮಾಡಿಕೊಂಡಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ BNS ಆಕ್ಟ್ 281 IMV ಆಕ್ಟ್ ನ 184 ಸಕ್ಷನ್ ಅಡಿ ಪ್ರಕರಣ ಸುಮೋಟೊ ಪ್ರಕರಣ ಪೊಲೀಸರು ದಾಖಲಿಸಿದ್ದಾರೆ.














