
ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣದ ವೇಳೆ ವಿದ್ಯಾರ್ಥಿನಿಯೊಬ್ಬಳು ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ವರ್ಷ ಖರಾತ್ (20) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಧಾರಶಿವ ಜಿಲ್ಲೆಯ ಪರಂಡಾದ ಆರ್.ಜೆ ಶಿಂಧೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಕಾಲೇಜಿನಲ್ಲಿ ವಿದ್ಯೆ ಕಲಿಸಿದ ಗುರುಗಳಿಗೆ ಧನ್ಯವಾದವನ್ನು ತಿಳಿಸಿ ಬಳಿಕ ಕೆಲ ವಿಚಾರದಲ್ಲಿ ಶಿಕ್ಷಕರ ಕಾಲೆಳೆದಿದ್ದಾಳೆ. ಇದಾಗಿ ಕೆಲವೇ ನಿಮಿಷದಲ್ಲಿ ವಿದ್ಯಾರ್ಥಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೇಳೆ ಬಾಲಕಿಯನ್ನು ಪರಿಶೀಲಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.






