ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ.

ತಾಯಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ್ದು ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೀಕ್ಷಾ ಎಂಬವರನ್ನು ವಿವಾಹವಾಗಿದ್ದರು. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!