
ಬೆಂಗಳೂರು: ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿ ಕಲಿಕೆಯ ಭಾಗವಾಗಿ ಬೆಳೆಸಿದ ತರಕಾರಿ ಸೇರಿ ಹಣ್ಣು ಹಂಪಲುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂಭ್ರಮಿಸಿದರು.
ಸರಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ:
ರಾಜಧಾನಿಯ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿಯಾದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲಾ ಆವರಣದಲ್ಲಿ ಬೆಳೆಸಿದ ಹಣ್ಣು ತರಕಾರಿಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂತಸಪಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು ಬೆಳೆದ ತರಕಾರಿ, ವಿವಿಧ ಹಣ್ಣು ಹಂಪಲು ಹಾಗೂ ಜೇನು ಕೃಷಿಯ ಬಗ್ಗೆ ಮಾಹಿತಿ ಪಡೆದು ಮಕ್ಕಳ ಕಾರ್ಯವನ್ನು ಶ್ಲಾಘಿಸಿ ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್‌ಗಳ ಉಡುಗೊರೆಯಾಗಿ ಈ ಸಂದರ್ಭದಲ್ಲಿ ನೀಡಿದರು.
ಶಾಲೆಯ ಶಿಕ್ಷಕ ವೃಂದ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್ ಈ ವೇಳೆ ಉಪಸ್ಥಿತರಿದ್ದರು.






