ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬರಲಿದೆ ಎಂದು ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಏ.8 ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.

ದ್ವಿತೀಯ ಪಿಯು ಪರೀಕ್ಷೆ-1ರ ರಿಸಲ್ಟ್ ನಾಳೆ ಮಧ್ಯಾಹ್ನ 1.30ಕ್ಕೆ ಪ್ರಕಟಿಸುವುದಾಗಿ ಪಿಯು ಬೋರ್ಡ್ ಮಾಹಿತಿ ನೀಡಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಅಧಿಕೃತ ಜಾಲತಾಣದಲ್ಲಿ ವೀಕ್ಷಿಸಬಹುದು.
ನಾಳೆ ಮಧ್ಯಾಹ್ನ ಪಿಯು ಬೋರ್ಡ್ ಸುದ್ದಿಗೋಷ್ಠಿ ಬಳಿಕ, ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. ಕಳೆದ ಮಾ.1ರಿಂದ 20ರವರೆಗೆ ಪರೀಕ್ಷೆಗಳು ನಡೆಸಲಾಗಿತ್ತು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ಒದಗಿಸಲಿದೆ. 2025ರ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ಈ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 3,35,468 ಗಂಡು ವಿದ್ಯಾರ್ಥಿಗಳು, 3,78,389 ಹೆಣ್ಣು ವಿದ್ಯಾರ್ಥಿಗಳು ಮತ್ತು ಐವರು ಟ್ರಾನ್ಸ್‌ಜೆಂಡರ್ ವಿದ್ಯಾರ್ಥಿಗಳು ಸೇರಿದ್ದಾರೆ.

ಫಲಿತಾಂಶ ವೀಕ್ಷಣೆ ಹೇಗೆ..?

ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://karresults.nic.inಅಥವಾ https://kseab.karnataka.gov.inಗೆ ಭೇಟಿ ನೀಡಬೇಕು.
ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು.
Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.
ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಗೂ ಅವಕಾಶ





Leave a Reply

Your email address will not be published. Required fields are marked *

Join WhatsApp Group
error: Content is protected !!