



ಬ್ರೇಕ್ ಚೇಂಬರ್ ತುಂಡಾದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ನಗರ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಸ್ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಈ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.
ಬಸ್ಸಿನಲ್ಲಿ ಇಪ್ಪತ್ತರಷ್ಟು ಮಂದಿ ಪ್ರಯಾಣಿಸುತ್ತಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಸ್ ನಿರ್ವಾಹಕ ತಿಳಿಸಿದ್ದಾರೆ.
