



ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ 29 ವರ್ಷದ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆಯಾಗಿದ್ದರು.
ಆದರೆ ಆತ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ಬಗ್ಗೆ ಅಸ್ಮಾ ಜೊತೆ ಸಾಕಷ್ಟು ಬಾರಿ ಗಲಾಟೆಯಾಗಿದೆ.
ಇದೀಗ ಇದರಿಂದ ಬೇಸತ್ತ ಅಸ್ಮಾ ನೇಣಿಗೆ ಶರಣಾಗಿದ್ದಾರೆ. ಆದ್ರೆ ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
