



ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಅದೇ ರೀತಿ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಇಂದು (ಏ. 9) ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಕಾರಣ ಹವಾಮಾನ (weather Forecast) ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬುಧವಾರ ಬಿರುಗಾಳಿ ಸಹಿತ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಏ.9ರಂದು ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 °C ಮತ್ತು 22 ° C ಆಗಿರಬಹುದು.
