
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಏ.10ರಿಂದ ಆರಂಭಗೊಳ್ಳಲಿದೆ.ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ. ಪ್ರತಿ ದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಈ ಬಾರಿ ಜಾತ್ರಾ ಮಹೋತ್ಸವ ಸಂದರ್ಭ ಅನ್ನಪ್ರಸಾದ ವಿತರಣೆಯು ದೇವಳದ ಕೆರೆಯ ಬಳಿ ನಡೆಯಲಿದೆ. ಜೊತೆಗೆ ಈ ಬಾರಿ ವಿಶೇಷವಾಗಿ ಶಿವಪೂಜೆ ಸೇವೆ ಇರಲಿದೆ.ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನಂತೆ ಉತ್ಸವಾದಿಗಳು ಸಮಯಕ್ಕೆ ಸರಿಯಾಗಿ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತಿಳಿಸಿದ್ದಾರೆ.
ಏ.10ಕ್ಕೆ ಬೆಳಿಗ್ಗೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಕುರಿಯ ಮಾಡಾವು ಎಳ್ಳಾಡುಗುತ್ತು ಕುಟುಂಬದವರಿಂದ ಅನ್ನಸಂತರ್ಪಣೆ ನಡೆಯಲಿದೆ.ಅದೇ ದಿನ ಸಂಜೆಯಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಳ್ಳಲಿದೆ.ಪೇಟೆ ಸವಾರಿಯುದ್ದಕ್ಕೂ ಪ್ರತಿ ಕಟ್ಟೆಯಲ್ಲೂ ಶ್ರೀ ದೇವರು ಪೂಜೆ ಸ್ವೀಕರಿಸಲಿದ್ದಾರೆ.ರಾತ್ರಿ ಅಂಕುರಾರ್ಪಣೆ ಬಲಿ ಹೊರಟು ಉತ್ಸವ, ಬೊಳುವಾರು ಶ್ರೀರಾಮಪೇಟೆ ಕಾರ್ಜಾಲು, ರಕ್ರೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ಸವಾರಿ ನಡೆಯಲಿದೆ.ಎ.11ಕ್ಕೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದವರಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ, ಏ.12ಕ್ಕೆ ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಎಳ್ಳಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರ ಸವಾರಿ.ಏ.13ರಂದು ಮೇಷ ಸಂಕ್ರಮಣ ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರುಬೈಲು ಸವಾರಿ, ಏ.14ರಂದು ಸೌರಮಾನ ಯುಗಾದಿ(ವಿಷು) ಬೆಳಿಗ್ಗೆ ಉತ್ಸವ, ವಸಂತಕಟ್ಟೆಪೂಜೆ, ರಾತ್ರಿ ಉತ್ಸವ, ಬಂಡಿ ಉತ್ಸವ, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೇಲ್, ಸಕ್ಕೆರೆಕಟ್ಟೆ ಸವಾರಿ, ಏ.15ಕ್ಕೆ ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ, ಏ.16ಕ್ಕೆ ಬೆಳಿಗ್ಗೆ ತುಲಾಭಾರ ಸೇವೆ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ
ಬರುವ ಕಿರುವಾಳು, ಪಾಲಕಿ ಉತ್ಸವ, ಸಣ್ಣರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವ ನಡೆಯಲಿದೆ. ವಿ.17ರಂದು ಬೆಳಿಗ್ಗೆ ಉತ್ಸವವಸಂತಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಬ್ರಹ್ಮರಥದಾನಿ ದಿ.ನೆಟ್ಟಾಳ ಮುತ್ತಪ್ಪ ರೈ ದೇರ್ಲ ಇವರ ಸ್ಮರಣಾರ್ಥ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಗಂಟೆ 7.30ರಿಂದ ಉತ್ಸವ, ಸಿಡಿಮದ್ದು ಪ್ರದರ್ಶನ(ಪುತ್ತೂರು ಬೆಡಿ), ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಬಂಗಾರ್ ಕಾಯರ್ ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ,
ಶ್ರೀ ಭೂತಬಲಿ, ಶಯನ ನಡೆಯಲಿದೆ. ಏ.18ಕ್ಕೆ ಬೆಳಿಗ್ಗೆ ಗಂಟೆ 7.30ಕ್ಕೆ ಬಾಗಿಲು ತೆರೆಯುವ ಮುಹೂರ್ತ, ತುಲಾಭಾರ ಸೇವೆ, ಸಂಜೆ ಗಂಟೆ 3.30ರಿಂದ ವೀರಮಂಗಲ ಅವಾಬ್ರುತ ಸ್ನಾನಕ್ಕೆ ಸವಾರಿ ನಡೆಯಲಿದೆ.ಏ.19ಕ್ಕೆ ಬೆಳಗ್ಗೆ ಧ್ವಜಾವರೋಹಣ, ರಾತ್ರಿ ಚೂರ್ಣೋತ್ಸವ ವಸಂತ ಪೂಜೆ ಪ್ರಾರಂಭಗೊಳ್ಳಲಿದೆ.ಹುಲಿ ಭೂತ, ರಕ್ಷೇಶ್ವರಿ ನೇಮ ನಡೆಯಲಿದೆ.ಎ.20ಕ್ಕೆ ಸಂಪ್ರೋಕ್ಷಣೆ, ರಾತ್ರಿ ಮಂತ್ರಾಕ್ಷತೆ, ಅಂಜಣತ್ತಾಯ, ಹಂಜುರ್ಲಿ, ವಗೈರೆ ದೈವಗಳ ನೇಮ ನಡೆಯಲಿದೆ ಎಂದವರು ತಿಳಿಸಿದರು.ಎಲ್ಲಾ ಉತ್ಸವಾದಿಗಳಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ವೇ.ಮೂ ವಸಂತಕೆದಿಲಾಯ ಅವರು ದೇವಳದ ಒಳಾಂಗಣದ ಆರ್ಚಕ ವ್ಯವಸ್ಥೆಯಲ್ಲಿ, ಉಳಿದಂತೆ ಈಶ್ವರ ಬೆಡೇಕರ್, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ದಿನೇಶ್ ಕುಲಾಲ್, ಮಹಾಬಲ ರೈ ವಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ವಿನಯ ಕುಮಾರ್ ಸುವರ್ಣ ಅವರ ವ್ಯವಸ್ಥಿತ ಜೋಡಣೆಯಂದಿಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು.






