ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಟ್ವಿಸ್ಟ್‌ ಸಿಕ್ಕಿದೆ. ಪೊಲೀಸರು ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌ನಲ್ಲಿ ಆರೋಪಿ ಬಷೀರ್‌ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

ಹೌದು ಪತ್ನಿ ಅಸ್ಮಾ ಅಸಹಜ ಸಾವು ಪ್ರಕರಣದಲ್ಲಿ ಆರೋಪಿ ಪತಿ ಬಷೀರ್‌ ವುಲ್ಲಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಹೆಬ್ಬಾಳ ಪೊಲೀಸರು ಬಷೀರ್‌ ಹಾಗೂ ಮೃತ ಅಸ್ಮಾರ ಮೊಬೈಲ್ ಹಾಗೂ ಲ್ಯಾಪ್ಟಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆಯ ಸಂದರ್ಭ ಪೊಲೀಸ್ ಅಧಿಕಾರಿಗಳಿಗೆ ಅಸ್ಮಾ ಲ್ಯಾಪ್ಟಾಪ್ನಲ್ಲಿ ಪತಿಯ ಅಶ್ಲೀಲ ವಿಡಿಯೋಗಳು ದೊರೆತಿವೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲೂ ಆರೋಪಿ ಹಲವು ಯುವತಿಯರ ಜೊತೆ ಸಂಬಂಧದಲ್ಲಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಬಷೀರ್ ನ್ಯಾಯಾಂಗ ಬಂಧನದಲ್ಲಿದ್ದು, ಅಸ್ಮಾ ಮರಣೋತ್ತರ ಪರೀಕ್ಷೆ ರಿಪೋರ್ಟ್ ಬಂದ ಬಳಿಕ ಆರೋಪಿಯನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!