ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ (Puttur) ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ (Indian Railways) ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲ್ವೆ‌ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.

ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು ವೇಳಾಪಟ್ಟಿ

ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜ‌ರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜ‌ರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ ಹೊರಟು 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ಹೊರಟು ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ಕೆಲವು ದಿನಗಳ ಹಿಂದಷ್ಟೇ ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಸಂದರ್ಭದಲ್ಲಿ ಸಚಿವ ಸೋಮಣ್ಣ ಈ ಘೋಷಣೆ ಮಾಡಿದ್ದರು. ಇದೀಗ ಅದರಂತೆ ರೈಲಿಗೆ ಚಾಲನೆ ನೀಡಿದ್ದಾರೆ.





Leave a Reply

Your email address will not be published. Required fields are marked *

Join WhatsApp Group
error: Content is protected !!