
ಪುತ್ತೂರು: ನಗರದ ದರ್ಭೆಯಲ್ಲಿರುವ ಆಶೀರ್ವಾದ ಪರ್ನೀಚರ್ ಮಳಿಗೆಯಲ್ಲಿ ಎ 14 ಬೆಳಿಗ್ಗೆ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮಳಿಗೆಯಲ್ಲಿದ್ದ ಪೀಠೋಪಕರಣಗಳು ಹಾನಿಗೊಳಗಾಗಿವೆ.
ಬೆಳಿಗ್ಗೆ ಹೊಗೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ.









