2022 ರಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ.

ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಆರೋಪ ಹೊರಿಸಿದೆ.

ಇದರೊಂದಿಗೆ, ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾದ ಒಟ್ಟು ಆರೋಪಿಗಳ ಸಂಖ್ಯೆ 27ಕ್ಕೆ ಏರಿದ್ದು, ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ಇಂದು ಆರೋಪಪಟ್ಟಿ ಸಲ್ಲಿಸಲಾದ ನಾಲ್ವರಲ್ಲಿ ಮೂವರು ತಲೆಮರೆಸಿಕೊಂಡಿರುವ ಆರೋಪಿಗಳು ಸೇರಿದ್ದಾರೆ. ಅವರನ್ನು ಅಬ್ದುಲ್ ನಾಸಿರ್, ನೌಶಾದ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ” ಎಂದು ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದ್ವಿಚಕ್ರ ವಾಹನದಲ್ಲಿ ಬಂದ ಪಿಎಫ್‌ಐಗೆ ಸೇರಿದ ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು





Leave a Reply

Your email address will not be published. Required fields are marked *

Join WhatsApp Group
error: Content is protected !!