ರಾಜಧಾನಿ ಬೆಂಗಳೂರು-ಕರಾವಳಿ ಜಿಲ್ಲೆಗಳಿಗೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದಿದೆ. ಬೇಸಿಗೆ ರಜೆಯ ಹಿನ್ನಲೆಯಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಎಸ್‌ಎಂವಿಟಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲನ್ನು ಓಡಿಸಲಾಗುತ್ತಿದೆ.

ಈ ವಿಶೇಷ ರೈಲು 20 ಬೋಗಿಯನ್ನು ಒಳಗೊಂಡಿದ್ದು, ಏಪ್ರಿಲ್ 17ರ ಗುರುವಾರ ಬೆಂಗಳೂರು ನಗರದಿಂದ ಹೊರಡಲಿದೆ.

ಸರ್‌. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚಾರ ನಡೆಸುವ ವಿಶೇಷ ರೈಲಿನ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಬಿಡುಗಡೆ ಮಾಡಿದೆ. ಈ ರೈಲಿನಲ್ಲಿ ಸಂಚಾರ ನಡೆಸುವ ಜನರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬಹುದು. ಶುಕ್ರವಾರದ ಸರ್ಕಾರಿ ರಜೆ, ಶನಿವಾರ, ಭಾನುವಾರದ ರಜೆ ಹಿನ್ನಲೆಯಲ್ಲಿ ಸಂಚಾರ ನಡೆಸುವ ಜನರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು.

ರೈಲು ವೇಳಾಪಟ್ಟಿ: ರೈಲು ನಂಬರ್ 06579 ಸರ್‌. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಮತ್ತು ಮಂಗಳೂರು ಜಂಕ್ಷನ್‌ ನಡುವೆ ಸಂಚಾರ ನಡೆಸಲಿದೆ. ಈ ರೈಲು ಎಸ್‌ಎಂವಿಟಿ ಬೆಂಗಳೂರಿನಿಂದ ಏಪ್ರಿಲ್ 17ರಂದು ರಾತ್ರಿ 11.55ಕ್ಕೆ ಹೊರಡಲಿದೆ. ಮಂಗಳೂರು ಜಂಕ್ಷನ್‌ಗೆ ಮರುದಿನ 4 ಗಂಟೆಗೆ ತಲುಪಲಿದೆ.

ರೈಲು ನಂಬರ್ 06580 ಮಂಗಳೂರು ಜಂಕ್ಷನ್-ಸರ್‌. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಡುವೆ ಸಂಚಾರವನ್ನು ನಡೆಸಲಿದೆ. ಈ ರೈಲು ಮಂಗಳೂರು ಜಂಕ್ಷನ್‌ನಿಂದ ಏಪ್ರಿಲ್ 20ರಂದು ಮಧ್ಯಾಹ್ನ 2.10ಕ್ಕೆ ಹೊರಡಲಿದೆ. ಬೆಂಗಳೂರು ನಗರಕ್ಕೆ ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.

ಈ ವಿಶೇಷ ರೈಲುಗಳು 20 ಬೋಗಿಯನ್ನು ಒಳಗೊಂಡಿವೆ. 1 ಫಸ್ಟ್ ಕ್ಲಾಸ್ ಎಸಿ ಬೋಗಿ, 2 ಎಸಿ 2 ಟೈರ್ ಬೋಗಿ, 4 ಎಸಿ ತ್ರಿ ಟೈರ್ ಬೋಗಿ, 7 ಸ್ಲೀಪರ್ ಕೋಚ್‌ಗಳು, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಜನರಲ್ ಸೆಕೆಂಡ್ ಕ್ಲಾಸ್ ಲಗೇಜ್ ಕಂ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ) ಒಳಗೊಂಡಿವೆ.

ಬೇಸಿಗೆ ವಿಶೇಷ ರೈಲು: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ ಶ್ರೀ ಸಿದ್ಧರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಗುಜರಾತ್ ರಾಜ್ಯದ ಅಹಮದಾಬಾದ್ ಹತ್ತಿರವಿರುವ ವಾಟ್ವಾ ನಿಲ್ದಾಣಗಳ ನಡುವೆ ಬೇಸಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ.

ರೈಲು ಸಂಖ್ಯೆ 07333 ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ವಾಟಾಗೆ ಏಪ್ರಿಲ್ 13 ರಿಂದ ಜೂನ್ 15, 2025ರ ವರೆಗೆ ಸಂಚಾರ ನಡೆಸಲಿದೆ. ಪ್ರತಿ ಭಾನುವಾರದಂದ ಸಂಜೆ 7:30 ಗಂಟೆಗೆ ಹುಬ್ಬಳ್ಳಿಯಿಂದ ಹೊರಡಲಿದೆ. ಈ ರೈಲು ಮರುದಿನ ಸೋಮವಾರ ಸಂಜೆ 6:45 ಗಂಟೆಗೆ ವಾಟ್ವಾವನ್ನು ತಲುಪಲಿದೆ.

ರೈಲು ಸಂಖ್ಯೆ 07334 ವಾಟ್ವಾದಿಂದ ಎಸ್‌ಎಸ್‌ಎಸ್‌ ಹುಬ್ಬಳ್ಳಿಗೆ ಏಪ್ರಿಲ್ 14 ರಿಂದ ಜೂನ್ 16, 2025 ರವರೆಗೆ ಸಂಚಾರ ನಡೆಸಲಿದೆ. ಪ್ರತಿ ಸೋಮವಾರ ವಾಟ್ವಾದಿಂದ ರಾತ್ರಿ 9:45 ಗಂಟೆಗೆ ರೈಲು ಹೊರಡಲಿದೆ. ಮಂಗಳವಾರ ರಾತ್ರಿ 7:45ಕ್ಕೆ ಹುಬ್ಬಳ್ಳಿಗೆ

ಆಗಮಿಸಲಿದೆ.

ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಧಾರವಾಡ, ಅಳ್ನಾವರ, ಲೋಂಡಾ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗ್ಲಿ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಬೋಯಿಸರ್, ವಾಪಿ, ಸೂರತ್, ವಡೋದರಾ ಮತ್ತು ಆನಂದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು 1-ಎಸಿ ಫಸ್ಟ್ ಕಮ್ ಎಸಿ 2 ಟೈರ್, 1-ಎಸಿ 2-ಟೈರ್, 3-ಎಸಿ 3-ಟೈರ್, 8-ಸ್ಲಿಪರ್‌ ಕ್ಲಾಸ್, 5-ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2-ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ

Leave a Reply

Your email address will not be published. Required fields are marked *

Join WhatsApp Group
error: Content is protected !!