ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ.
ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.ಜಿಲ್ಲೆಯ ವಿವಿಧ ಠಾಣೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್‌ಗೆ ನಿಯೋಜಿಸಲಾಗಿದೆ.ಜೊತೆಗೆ ಗೃಹರಕ್ಷಕದಳದವರೂ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಮಪ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳಿಗ್ಗೆ ಶ್ರೀ ದೇವಳದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ ಸಹಿತ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಪ್ರದರ್ಶನ ನಡೆಯಲಿದೆ.ಈ ವರ್ಷ ದೇವಳದ ಭಂಡಾರದ ಬದಲು ಭಕ್ತರ ಸೇವೆಯ ಮೂಲಕ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.ಸೋನಿ ಎಂಬವರು ಸಿಡಿಮದ್ದು ಪ್ರದರ್ಶನ ನಡೆಸಿಕೊಡಲಿದ್ದಾರೆ














