ಪುತ್ತೂರು :ಇಂದು ಸಂಜೆ 3.00 ಗಂಟೆಗೆ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಮೈದಾನದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ನಡೆಯಲಿರುವ ಪ್ರತಿಭಟನಾ ಸಮಾವೇಶಕ್ಕೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ. ಎಸ್. ಮೊಹಮ್ಮದ್ ಮಸೂದ್ ರವರು ಸಂಪೂರ್ಣ ಬೆಂಬಲವನ್ನು ಸೂಚಿಸಿ, ಇಂದಿನ ಸಭೆಗೆ ಗರಿಷ್ಠ ಮಟ್ಟದಲ್ಲಿ ಜನಸಾಮಾನ್ಯರು ಪಾಲ್ಗೊಳ್ಳುವಂತೆ ವಿನಂತಿಸಿರುತ್ತಾರೆ ಎಂದು, ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ ಮತ್ತು ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.














