
ಏಪ್ರಿಲ್ 19: ಸದಾ ಗನ್ ಮ್ಯಾನ್ ಇಡ್ಕೊಂಡು ಓಡಾಡುವ ರಿಕ್ಕಿ ರೈ (Rikki Rai)ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೂವರ ವಿರುದ್ಧ ದೂರು
ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು.
ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್ ಎಸ್ 109,3(5) ಹಾಗೂ ಆರ್ಮ್ಸ್ ಆಯಕ್ಟ್ ಅಡಿ ಕೇಸ್ ದಾಖಲಾಗಿದೆ..ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ









