ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿರುವ ಘಟನೆ ನಡೆದಿದೆ.

ಶನಿವಾರ ಬೆಳಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ.

ಈ ಸಂದರ್ಭದಲ್ಲಿ ಅರ್ಚಕರು ರಥದಲ್ಲಿ ಕುಳಿತಿದ್ದರು. ಕೆಳಗಡೆ ಸಾವಿರಾರು ಭಕ್ತರು ರಥ ಎಳೆಯುವುದರಲ್ಲಿ ತಲ್ಲೀನರಾಗಿದ್ದರು. ಏಕಾ ಏಕಿ ರಥವನ್ನು ನಿಗ್ರಹಿಸುವ ದಂಡ ತುಂಡಾದ ಪರಿಣಾಮ ರಥದ ಮೇಲ್ಬಾಗ ಸಂಪೂರ್ಣ ಧರೆಗೆ ಉರುಳಿದೆ. ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ತರಚಿದ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯು ಭಕ್ತ ಸಮೂಹದಲ್ಲಿ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ಮುಂದುವರಿಸಲಾಯಿತು. ಯಾವುದೇ ವಿಘ್ನವಿಲ್ಲದೆ ಜಾತ್ರೋತ್ಸವ ಮುಂದುವರಿದಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!