ಮಂಗಳೂರು: ಗುಂಡೇಟಿನಿಂದ ಗಂಭೀರ ಗಾಯಗೊಂಡು ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು.

ಈ ಕುರಿತು ಇದೀಗ ಸ್ವತಃ ಡಿಕೆಶಿಯವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಲ್ಲ. ನನ್ನ ಜಿಲ್ಲೆಯಲ್ಲಿ ರಿಕ್ಕಿ ರೈ ಮೇಲೆ ದಾಳಿಯಾಗಿದೆ. ಪೊಲೀಸರಿಗೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲು ಹೇಳಿದ್ದೇನೆ. ಯಾವುದೇ ಪಕ್ಷ ಇದ್ದರೂ ಕಾನೂನಿಗೆ ತಲೆ ಬಾಗಲೇಬೇಕು ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಮೂಗು ಹಾಗೂ ತೋಳಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿರುವ ರಿಕ್ಕಿ ರೈಗೆ ಡಿಕೆಶಿಯವರು ಶನಿವಾರ ಸಂಜೆ ಕರೆ ಮಾಡಿ ಘಟನೆ ಹೇಗಾಯ್ತು..?. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಅಂತಾ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿದ್ದವು.

Leave a Reply

Your email address will not be published. Required fields are marked *

Join WhatsApp Group
error: Content is protected !!