ಪುತ್ತೂರು; ಮುಳಿಯದಲ್ಲೊಂದು ಕ್ರೀಯಾಶೀಲತೆ ಮತ್ತು ಸಂತೋಷ ಇದೆ, ಇಲ್ಲದಿದ್ದರೆ ಮುಳಿಯದಂತಹ ಸಂಸ್ಥೆ ೮೧ ವರ್ಷಗಳ ಸುದೀರ್ಘ ಕಾಲ ಉಳಿಯಲು ಸಾಧ್ಯವಿರಲಿಲ್ಲ. ಈ ಸಂಸ್ಥೆಯು ತನ್ನ ಪರಂಪರೆಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದಿದೆ. ಪ್ರಸ್ತುತ ಈ ಸಂಸ್ಥೆ ವ್ಯವಹಾರವನ್ನು ರೂ.೫ ಸಾವಿರ ಕೋಟಿಗೆ ವಿಸ್ತರಿಸುವ ಕನಸು ಹೊಂದಿದೆ ಎಂದು ಖ್ಯಾತ ಚಿತ್ರನಟ ಹಾಗೂ ಮುಳಿಯ ಚಿನ್ನದ ಸಂಸ್ಥೆಯ ಬ್ರಾö್ಯಂಡ್ ರಾಯಭಾರಿಯಾಗಿರುವ ರಮೇಶ್ ಅರವಿಂದ್ ಅಭಿಪ್ರಾಯಪಟ್ಟರು.
ಅವರ ಭಾನುವಾರ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿ ಭಾಗದಲ್ಲಿ ಅತ್ಯಂತ ಹೆಸರುವಾಸಿಯಾಗಿರುವ  ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಶ್ಲೋಗನ್, ಫಿಲಾಸಫಿ ಹಾಗೂ ಈ ಸಂಸ್ಥೆಯನ್ನು ನಡೆಸುತ್ತಿರುವ ಸಹೋದರರ ಸಂಸ್ಕೃತಿಗೆ ಮಾರುಹೋಗಿ ಮುಳಿಯ ಸಂಸ್ಥೆಯ ರಾಯಭಾರಿಯಾಗಿದ್ದೇನೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಚಿನ್ನದ ಮೂಲಕ ಉಳಿತಾಯ ಮಾಡುವುದು ಹೆಚ್ಚು ಶ್ರೇಯಸ್ಕರ ಎಂಬ ಚಿಂತನೆ ನಮ್ಮಲ್ಲಿ ಹೆಚ್ಚಾಗಬೇಕು. ಬದುಕಿನಲ್ಲಿ ಸಂತೋಷವನ್ನು ಎಲ್ಲೆಲ್ಲೋ ಹುಡುಕಬೇಕಾಗಿಲ್ಲ. ಸಂತೋಷ ನಮ್ಮ ಒಳಗೇ ಇದೆ. ಅದನ್ನು ಅರ್ಥಮಾಡಿಕೊಳ್ಳುವ ಯೋಚನೆ ಮಾಡಬೇಕಾಗಿದೆ. ಎಲ್ಲರನ್ನೂ ಪ್ರೀತಿಸುವ ಹಾಗೂ ಸಹಬಾಳ್ವೆಯ ಬದುಕನ್ನು ಮುಳಿಯ ಸಂಸ್ಥೆ ತನ್ನ ಚಿನ್ನದ ಮಳಿಗೆಯಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಲಿದೆ ಎಂದು ಅವರು ಹೇಳಿದರು. 
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಚೇರ್ಮನ್ ಕೇಶವ ಪ್ರಸಾದ್ ಮುಳಿಯ ಅವರು, ೮೧ ವರ್ಷಗಳ ಹಿಂದೆ ಕಟ್ಟೆಯಲ್ಲಿ ಹುಟ್ಟಿದ ಮುಳಿಯ ಸಂಸ್ಥೆ ಇದೀಗ ತನ್ನ ಪಾರಂಪರಿಕ ವ್ಯವಸ್ಥೆಯೊಂದಿಗೆ ಹೊಸತನಕ್ಕೆ ತೆರೆದುಕೊಂಡಿದೆ. ಮುಳಿಯ ಸಂಸ್ಥೆ ಎಂಬುವುದು ಗ್ರಾಹಕರ ದೇಗುಲ. ಮುಳಿಯ ಸಂಸ್ಥೆಗೊAದು ವ್ಯಕ್ತಿತ್ವ ಇರುವ ಬ್ರಾö್ಯಂಡ್ ಇದೆ. ಗ್ರಾಹಕರಿಗೆ ನಷ್ಟವಾಗಬಾರದು ಎಂಬುವುದೇ ಮುಳಿಯ ಸಂಸ್ಥೆಯ ವ್ಯಕ್ತಿತ್ವ ಆಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಈಗಿರುವ ಚಿನ್ನದ ಮಳಿಗೆಗಳಿಗೆ ಇನ್ನೊಂದಷ್ಟು ಮಳಿಗೆಗಳ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು. ಹಾಗಾಗಿ ಸಂಸ್ಥೆಯ ಮಳಿಗೆಗಳನ್ನು ಆಕರ್ಷಣೀಯವಾಗಿ ಗ್ರಾಹಕರ ಆಶಯಗಳಿಗೆ ತಕ್ಕಂತೆ ರೂಪಾಂತರ ಮಾಡಲಾಗಿದೆ ಎಂದರು.
ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ಮಾತನಾಡಿ, ೮೧ ವರ್ಷಗಳ ಹಿಂದೆ ಹುಟ್ಟಿಕೊಂಡ ಈ ಸಂಸ್ಥೆ ಆಗ ಮನೆಮನೆಗೆ ಹೋಗಿ ಚಿನ್ನ ಮಾರಾಟ ಮಾಡುವ ಸ್ಥಿತಿಯಿಂದ ಬೆಳೆದು ಇಂದು ಆಧುನಿಕ ನೆಲೆಯಲ್ಲಿ ಚಿನ್ನದ ಮಳಿಗೆಯ ತನಕ ಸ್ಥಿತ್ಯಂತರ ಹೊಂದಿದೆ. ನಮ್ಮ ಗ್ರಾಹಕರಿಗೆ ನಮ್ಮ ಚಿನ್ನದ ಮಳಿಗೆಗಳು ಪ್ರಯೋಜನವಾಗುವಂತಹ ಆಯ್ಕೆಯ ಸ್ಥಳವಾಗಬೇಕು ಹಾಗೂ ಅವರಿಗೆ ಸಂತೋಷ ದೊರಕಬೇಕು ಎಂಬುವುದು ನಮ್ಮ ಆಶಯ. ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ರಾಯಭಾರಿಯಾಗಿರುವ ರಮೇಶ್ ಅರವಿಂದ್ ಸಮಾಜಕ್ಕೆ ಒಳಿತನ್ನು ಬಯಸುವವರು. ಮುಳಿಯ ಸಂಸ್ಥೆಯೂ ಅದನ್ನೇ ಬಯಸುತ್ತಿದೆ. ಹಾಗಾಗಿ ಎರಡು ವ್ಯಕ್ತಿತ್ವದ ಚಿಂತನೆಗಳು ಒಂದಾಗಿ ಸೇರಲು ಕಾರಣವಾಯಿತು. ಮುಳಿಯ ಮಳಿಗೆಗಳಲ್ಲಿ ಗ್ರಾಹಕರಿಗೆ ಅನುಕೂಲವಾದ ವಾತಾವರಣಕ್ಕೆ ಬೇಕಾದ ಸೌಲಭ್ಯಗಳನ್ನು ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಬ್ರಾö್ಯಂಡ್ ಕನ್ಸಲ್ಟೆಂಟ್ ವೇಣು ಶರ್ಮ ಸ್ವಾಗತಿಸಿದರು. ವಿದುಷಿ ನಂದಿನಿ ನಾಯಕ್ ಪ್ರಾರ್ಥಿಸಿದರು. ಸಂಸ್ಥೆಯ ಶಿವಪ್ರಸಾದ್ ವಂದಿಸಿದರು. ಬಿಗ್‌ಬಾಸ್ ಖ್ಯಾತಿಯ ಪ್ರದೀಪ್ ಬಡೆಕ್ಕಿಲ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭದಲ್ಲಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಯ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಅನೇಕ ಪ್ರಮುಖರು, ಸಿಬ್ಬಂಧಿಗಳು ಉಪಸ್ಥಿತರಿದ್ದರು.


ತೆರೆದ ಜೀಪಿನಲ್ಲಿ ಮೆರವಣಿಗೆ
ಸಭಾ ಕಾರ್ಯಕ್ರಮಕ್ಕೆ ಮೊದಲು ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿದ ಚಿತ್ರನಟ ರಮೇಶ್ ಅರವಿಂದ್ ಅವರು ಅಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇವಳದಿಂದ ಬೆಳಗಿನಿಂದ ದೀಪ ಹಾಗೂ ರಮೇಶ್ ಅರವಿಂದ್ ಅವರನ್ನು ತೆರೆದ ಜೀಪಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ಮುಳಿಯ ಸಂಸ್ಥೆಯ ವಿಸ್ತೃತ ಕಟ್ಟಡವನ್ನು ತೆರೆ ಸರಿಸುವ ಮೂಲಕ ವಿಶೇಷ ರೀತಿಯಲ್ಲಿ ಉದ್ಘಾಟಿಸಲಾಯಿತು.

ಪುತ್ತೂರು ದೇವಳ ದಿವ್ಯವಾದ ಸ್ಥಳ
ಕೆಲವು ದೇವಳಗಳ ಬಗ್ಗೆ ವಿಶೇಷವಾದ ಆಕರ್ಷಣೆ ಇರುತ್ತದೆ. ಪುತ್ತೂರು ದೇವಳ ಬಹಳ ಪವಿತ್ರವಾದ ಹಾಗೂ ದಿವ್ಯ ಜಾಗ. ಇಲ್ಲಿಗೆ ಬಂದಿರುವುದು ತುಂಬಾ ಸಂತೋಷ ಕೊಟ್ಟಿದೆ. ಪುತ್ತೂರಿಗೆ ಹಲವು ಸಲ ಭೇಟಿ ನೀಡಿದ್ದೇನೆ. ಆದರೆ ಈ ಬಾರಿ ವಿಶೇಷ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ. ಇಲ್ಲಿನ ಸ್ಥಳ ಪುರಾಣಗಳ ಬಗ್ಗೆ ತಿಳಿದಾಗ ದಿವ್ವಾದ ಅನುಭೂತಿ ಉಂಟಾಗುತ್ತಿದೆ- ರಮೇಶ್ ಅರವಿಂದ್

Leave a Reply

Your email address will not be published. Required fields are marked *

Join WhatsApp Group
error: Content is protected !!