ನೆಲ್ಯಾಡಿ: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

16 ವರ್ಷದ ಬಾದಿತೆಯು ಪ್ರಥಮ ವರ್ಷದ ಪಿಯುಸಿ ವಿದ್ಯಾಬ್ಯಾಸವನ್ನು ಅರ್ಧದಲ್ಲಿ ಮೊಟಕುಗೊಳಿಸಿ ಮನೆಯಲ್ಲಿದ್ದು ದೂರದ ಸಂಬಂಧಿಕನೂ ಆದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ಮನೆಗೆ ಫೆ.10ರಂದು ಹೋಗಿದ್ದು ಆ ದಿನ ರಾತ್ರಿ ಊಟ ಮಾಡಿ ಮಲಗಿದ್ದ ಸಮಯ ಆರೋಪಿ ರಮೇಶನು ಬಾದಿತೆ ಮಲಗಿದ್ದಲ್ಲಿಗೆ ಬಂದು ಬಲತ್ಕಾರವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ.

ನಂತರ ಮಾ.9, ಮಾ.27, ಮಾ.28 ರಂದು ಬಾದಿತೆಯ ಇಚ್ಚೆಗೆ ವಿರುದ್ದವಾಗಿ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಮಾ.26 ರಂದು ಉಪ್ಪಿನಂಗಡಿ ಪೊಲೀಸರು, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಶಿಶು ಅಭಿವೃದ್ಧಿ ಇಲಾಖೆಯವರು ಬಾದಿತೆಯನ್ನು ಆಕೆಯ ಮನೆಯಿಂದ ಕರೆದುಕೊಂಡು ಬಂದು ಮಂಗಳೂರು ಕಾವೂರಿನಲ್ಲಿರುವ ಬಾಲಕಿಯರ ಬಾಲ ಮಂದಿರಕ್ಕೆ ಸೇರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!