ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಸಿಎಂ ಸಿದ್ದರಾ,ಯ್ಯ ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!