ಜಮ್ಮು ಮತ್ತು ಕಾಶ್ಮೀರದ  ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವುಕರಾಗಿದ್ದಾರೆ.

ಪಹಲ್ಲಾಮ್ ಉಗ್ರರ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದು, ರಾಹುಲ್ ಗಾಂಧಿ ಅವರು ಭಾವುರಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಅವರು, ಈ ಹೇಡಿತನದ ದಾಳಿಯನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಈ ದಾಳಿಯಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಭಯೋತ್ಪಾದನೆಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿ ನಿಂತಿದೆ. ಆದರೆ ಈಗ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆಗಳನ್ನು ನೀಡಬಾರದು. ಇದಕ್ಕೆ ವಿರುದ್ಧವಾಗಿ, ಈ ದಾಳಿಯ ಜವಾಬ್ದಾರಿಯನ್ನು ಸ್ವೀಕರಿಸಲು ಮತ್ತು ಸೂಕ್ತವಾಗಿ ಪ್ರತಿಕ್ರಿಯಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂತಹ ಖಂಡನೀಯ, ಕ್ರೂರ ಘಟನೆಗಳು ಮತ್ತೆ ಸಂಭವಿಸದಂತೆ ಮತ್ತು ಅಮಾಯಕ ಭಾರತೀಯರು ಪ್ರಾಣ ಕಳೆದುಕೊಳ್ಳಬೇಕಾಗಿಲ್ಲ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!