ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು (ಏಪ್ರಿಲ್ 24, 2025)ಸಂಜೆ 7 ಗಂಟೆಗೆ ಪುತ್ತೂರು ಬಸ್ಸು ನಿಲ್ದಾಣದ ಬಳಿ ಮೊಂಬತ್ತಿ ಉರಿಸಿ ಬೃಹತ್‌ ಪ್ರತಿಭಟನೆ ಸಭೆ ನಡೆಯಲಿದೆ.

ಪಹಲ್ಗಾಮ್‌ ನಲ್ಲಿ ನಡೆದ ಈ ಹೇಯ ಕೃತ್ಯದಲ್ಲಿ ಸುಮಾರು 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ.

ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ, ಉಗ್ರವಾದದ ವಿರುದ್ಧ ತಮ್ಮ ದೃಢ ನಿಲುವನ್ನು ಪ್ರದರ್ಶಿಸಬೇಕು ಎಂದು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!