
ಭೂಗತ ಲೋಕದ ಡಾನ್ ಮುತ್ತಪ್ಪ ರೈನ ಮಗ ರಿಕ್ಕಿ ರೈ ಮೇಲೆ ನಡೆದ ದಾಳಿಗೆ ಸಂಬಂಧಪಟ್ಟಂತೆ ರಿಕ್ಕಿ ರೈ ಅವರ ಗನ್ ಮ್ಯಾನ್ ವಿಠ್ಠಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಇದೀಗ ವಿಠ್ಠಲ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಈ ಹಿಂದೆ ರಾಮನಗರ ಜಿಲ್ಲೆಯ ಪೊಲೀಸರು ಗನ್ ಮ್ಯಾನ್ ವಿಠ್ಠಲ್ ನನ್ನುಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ ಪೊಲೀಸರು ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ವಿಠ್ಠಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸದ್ಯ ಈ ಬಗ್ಗೆ ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.





