ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ನಡೆದ ಉಗ್ರರ ದಾಳಿ ಪ್ರಕರಣದಿಂದ ಸದ್ಯ ಭಾರತ ಮತ್ತು ಪಾಕ್ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ಪಾಕ್ ತನ್ನ ಗಡಿಯಲ್ಲಿ ಸೇನೆ ಹೆಚ್ಚಳ ಮಾಡಿದ್ದು, ಭಾರತವೂ ಸಜ್ಜಾಗಿ ಅನೇಕ ಹೆಜ್ಜೆಗಳನ್ನು ಮುಂದಿಟ್ಟಿದೆ.

ಯುದ್ಧದ ಪರಿಸ್ಥಿತಿ ಉದ್ಭವಿಸಿರುವ ನಿಮಿತ್ತ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ, ವಾಹಿನಿಗಳಿಗೆ ಸಲಹೆ ನೀಡಿ ಆದೇಶಿಸಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಎಲ್ಲಾ ಮಾಧ್ಯಮ ವೇದಿಕೆಗಳು, ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ರಕ್ಷಣೆ ಮತ್ತು ಇತರ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವರದಿ ಮಾಡುವಾಗ, ಅತ್ಯಂತ ಜವಾಬ್ದಾರಿಯನ್ನು ವಹಿಸಬೇಕು ಎಂದು ಹೇಳಿದೆ.

ಅಲ್ಲದೇ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಬದ್ಧತೆ ಹೊಂದಿರಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಸಲಹೆಯಲ್ಲಿ ಉಲ್ಲೇಖಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!