ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ.

ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ 10 ಗ್ರಾಂಗೆ ರೂ.2500 ರವರೆಗೆ ಕಡಿತ ಹಾಗೂ ವಜ್ರಾಭರಣಗಳ ಖರೀದಿಯಲ್ಲಿ ಪ್ರತಿ ಕ್ಯಾರೆಟ್ ಗೆ 7,000 ರೂ. ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತಿ ಕೆ.ಜಿ.ಗೆ 3,000 ರೂ ರಿಯಾಯಿತಿ ನೀಡಲಾಗುವುದು.

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದೊಗೆ ಈ ಕೊಡುಗೆ ತಮ್ಮ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!