ಜಸ್ಟೀಸ್ ಬಿ.ಆರ್. ಗವಾಯಿ ಅವರು ಮೇ 14 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷಪಡುತ್ತೇನೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!