ಬಜ್ಪೆ ಕಿನ್ನಿ ಪದವು ಎಂಬಲ್ಲಿ ಕಳೆದ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು ಸುರತ್ಕಲ್ ಬಜ್ಪೆ ಸೇರಿದಂತೆ ಮಂಗಳೂರು ನಗರ ಬಹುತೇಕ ಸ್ತಬ್ಧ ಗೊಂಡಿದೆ. ವಿವಿಧ ಕಡೆ ಅಂಗಡಿ ಮುಂಗಟ್ಟು ಬಸ್ ಸಂಚಾರ ಸ್ಥಗಿತ ಗೊಂಡಿದೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ
ಇದೇ ವೇಳೆ ಮೂರು ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಘಟನೆ ನಡೆದಿದೆ.
ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಮಂಗಳೂರಿನಲ್ಲಿ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂದ್ ಕರೆ ನೀಡಲಾಗಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಎನ್‌ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.














