ಬ ಜ್ಪೆಯ ಕಿನ್ನಿಪದವು ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದೆ. ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಫಿನೀಶ್’ ಎಂಬ ಪೋಸ್ಟ್ ವೈರಲ್ ಆಗಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ನಿನ್ನೆ ರಾತ್ರಿ ಸುಹಾಸ್ ಶೆಟ್ಟಿಯನ್ನು ಹಂತಕರು ಯೋಜಿತವಾಗಿ ಹತ್ಯೆಗೈದಿದ್ದಾರೆ. ಈ ಕೊಲೆಯನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನ ಫಾಜಿಲ್ ಎಂಬಾತನ ಕೊಲೆಗೆ ಸೇಡಿನ ಭಾಗವೆಂದು ಶಂಕಿಸಲಾಗಿದೆ. ಕೊಲೆಯ ಬಳಿಕ ‘ಫಿನೀಶ್’ ಎಂಬ ಪೋಸ್ಟ್ Troll_mayadiaka ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪ್ರಕಟವಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಗಮನ ಸೆಳೆದಿದೆ.

ಮಾರ್ಚ್ 31ರಂದು ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿಯ ಫೋಟೋವನ್ನು ಹಂಚಿಕೊಂಡು, ಶೀಘ್ರದಲ್ಲಿ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಮಾಡಲಾಗಿತ್ತು. ಈ ಬೆಳವಣಿಗೆಯಿಂದಾಗಿ ಸುಹಾಸ್ ಶೆಟ್ಟಿಯ ಹತ್ಯೆಗೆ ಮುಂಚಿತವಾಗಿಯೇ ಯೋಜನೆ ರೂಪಿಸಲಾಗಿತ್ತೇ ಎಂಬ ಅನುಮಾನಗಳು ಮೂಡಿವೆ.

ಕೊಲೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಇನ್‌ಸ್ಟಾಗ್ರಾಂ ಖಾತೆಯಿಂದ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗವಾಯಿತು. ಜೊತೆಗೆ, ‘Waiting for next wicket’ ಎಂಬ ಕಾಮೆಂಟ್‌ನೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸಲಾಗಿದೆ. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಖಾತೆಗಳನ್ನು ನಿರ್ವಹಿಸಲಾಗುತ್ತಿದೆ ಎಂಬ ಆರೋಪಗಳಿವೆ

Leave a Reply

Your email address will not be published. Required fields are marked *

Join WhatsApp Group
error: Content is protected !!