
ಕೊ ಲೆ ಗೀಡಾದ ವ್ಯಕ್ತಿ ಸುಹಾಸ್ ಶೆಟ್ಟಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ ಎಂದು ಸಿಎಂ(CM) ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.






