
ಮಂಗಳೂರಿನ ಬಜಪೆ ಸಮೀಪ ಭೀಕರವಾಗಿ ಹತ್ಯೆಗೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಅಂತಿಮ ವಿಧಿವಿಧಾನಗಳನ್ನು ಪುಳಿಮಜಲಿನಲ್ಲಿರೋ ಅವರ ನಿವಾಸದ ಬಳಿ ಹಿಂದೂ ಸಂಪ್ರದಾಯದಂತೆ ನೆರವೇರಿಸಲಾಗಿದೆ.
ನ್ನೆ ರಾತ್ರಿ 8:30 ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ನಡುರಸ್ತೆಯಲ್ಲೇ ಅಡ್ಡಗಟ್ಟಿ ಹಂತಕರು ಬರ್ಬರವಾಗಿ ಹತುಗೈದಿದ್ದರು.ಇಂದು ಮರಣೋತ್ತರ ಪರೀಕ್ಷೆಯ ನಂತರ ಬೆಳಿಗ್ಗೆ 9:30 ರ ಸುಮಾರಿಗೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಎ.ಜೆ ಆಸ್ಪತ್ರೆಯಿಂದ ಮೃತದೇಹವನ್ನು ಕೊಂಡೊಯ್ದ ಕುಟುಂಬಸ್ಥರು ಬಂಟ್ವಾಳದ ಕಾರಿಂಜ ಪುಳಿಮಜಲಿನಲ್ಲಿರೋ ಮನೆಯ ಸಮೀಪ ತೋಟದಲ್ಲಿ ಸುಹಾಸ್ ಶೆಟ್ಟಿಯವರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.






