ಮಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿರುವ ಗೃಹ ಸಚಿವರು 11 ಗಂಟೆ ತನಕ‌ ಸಮಯ ಕಾಯ್ದಿರಿಸಿದ್ದಾರೆ. ಬಳಿಕ ಬೆ. 11 ಗಂಟೆಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ದಕ್ಷಿಣ ಕನ್ನಡ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಉಸ್ತುವಾರಿ ದಿನೇಶ್ ಗುಂಡೂರಾವ್ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಗೃಹ ಸಚಿವರು ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಬೆಳಿಗ್ಗೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದು, ಬಳಿಕ ಸರ್ಕ್ಯೂಟ್ ಹೌಸ್‌ಗೆ ಆಗಮಿಸಲಿದ್ದಾರೆ. ಬೆ.11ಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಲಿದ್ದಾರೆ.

ರಾತ್ರಿ 7.15ಕ್ಕೆ ಬೆಂಗಳೂರಿಗೆ ವಾಪಾಸಾಗಲಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!