
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಬಯಲಾಗಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಅಧಿಕೃತ ಘೋಷಣೆ ಸಾಧ್ಯತೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಆರೋಪಿಗಳ ತಂಡ ಅಡ್ಡಗಟ್ಟಿ ಮಂಗಳೂರಿನ ಬಜ್ಪೆ ಸಮೀಪ ಹ*ತ್ಯೆ ಮಾಡಿತ್ತು. ಮೇ.01ರಂದು ಈ ಘಟನೆ ನೆಡೆದಿತ್ತು. ನಿನ್ನೆ ಸುಹಾಶ್ ಶೆಟ್ಟಿ ಅಂತ್ಯಸಂಸ್ಕಾರ ಕಾರಿಂಜದ ಸ್ವಗೃಹದಲ್ಲಿ ನಡೆದಿದೆ. ಈ ಘಟನೆಯಿಂದ ರಾಜ್ಯಾದ್ಯಂತ ಆಕ್ರೋಶಗಳು ಹೆಚ್ಚಾಗುತ್ತಿದೆ. ಇತ್ತ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, 8 ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆದಿರುವ ಕೆಲ ಆರೋಪಿಗಳು ದಕ್ಷಿಣ ಕನ್ನಡದಲ್ಲೇ ಅವಿತು ಕುಳಿತಿದ್ದರು. ಆರೋಪಿಗಳ ವಶಕ್ಕೆ ಪಡೆದಿರುವ ಕುರಿತು ಇಂದು ಮಂಗಳೂರು ಕಮಿಷನರ್ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.






